Job Description: * ಪ್ರಸ್ತುತ ಡ್ರೋನ್ಗಳು ಹಾಗೂ ಮಾನವರಹಿತ ವೈಮಾನಿಕ ವಾಹನಗಳನ್ನು ಶ್ರೀನಗರ ಜಿಲ್ಲೆಯ ಪ್ರಾದೇಶಿಕ ವ್ಯಾಪ್ತಿಯಲ್ಲಿ ಸಂಗ್ರಹಣೆ, ಮಾರಾಟ, ಬಳಕೆ ಮತ್ತು ಸಾಗಣೆಯನ್ನು ಶ್ರೀನಗರ ಜಿಲ್ಲೆಯ ಅಧಿಕಾರಿಗಳು ನಿಷೇಧಿಸಿದ್ದಾರೆ ಎಂದು ತಿಳಿದು ಬಂದಿದೆ. * ಶ್ರೀನಗರ ಜಿಲ್ಲೆಯ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೂಟಗಳಲ್ಲಿ ಡ್ರೋನ್ಗಳ ಬಳಕೆಯನ್ನು ನಿಲ್ಲಿಸುವುದು ಕಡ್ಡಾಯ ಎಂದು ಅಲ್ಲಿನ ಅಧಿಕಾರಿಗಳು ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. * ಪ್ರಸ್ತುತ ಶ್ರೀನಗರ ಜಿಲ್ಲೆಯಲ್ಲಿ ಈಗಾಗಲೇ ಡ್ರೋನ್ ಕ್ಯಾಮೆರಾಗಳು ಅಥವಾ ಮಾನವರಹಿತ ವೈಮಾನಿಕ ವಾಹನಗಳನ್ನು (UAV) ಹೊಂದಿರುವ ವ್ಯಕ್ತಿಗಳು ಅವುಗಳ ರಶೀದಿಯೊಂದಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಿಸಬೇಕು ಎಂದು ತಿಳಿಸಿದ್ದಾರೆ. * ಇತ್ತೀಚಿಗೆ ಜೂನ್. 27 ರಂದು ಜಮ್ಮು ವಾಯುಪಡೆ ನಿಲ್ದಾಣದ ಮೇಲೆ ಡ್ರೋನ್ಗಳನ್ನು ಬಳಸಿ ದಾಳಿ ನಡೆಸಿರುವ ಕಾರಣಗಳಿಂದ ಈ ಆದೇಶವನ್ನು ಅಧಿಕಾರಿಗಳು ಹೊರಡಿಸಿದ್ದಾರೆ.