Job Description: * ಕರ್ನಾಟಕ ರಾಜ್ಯ ಸರ್ಕಾರವು ಇದೀಗ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ( NEKRTC)ವನ್ನು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರು ನಾಮಕರಣ ಮಾಡಿದೆ. * ಸಾರಿಗೆ ನಿಗಮಗಳ ಅಧಿನಿಯಮ 1950 ರ ಕಲಮ್ 3 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಗಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಬದಲಾಯಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಪ್ರಸ್ತುತ ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.