Job Description: * ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಇದೀಗ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ ಮತ್ತು ಡೆಂಗಿ ಜ್ವರದ ಪ್ರಕರಣಗಳು ಹೆಚ್ಚುತ್ತಿವೆ, ಹಾಗೂ ಜಿಲ್ಲೆಯ ಜನಗಳಿಗೆ ಆತಂಕ ಸೃಷ್ಟಿಸಿದೆ. * ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದ ಶೇ 80 ರಷ್ಟು ಮಲೇರಿಯಾ ಪ್ರಕರಣ ಇವೆ, ಹಾಗೂ ಈ ಜಿಲ್ಲೆಯೇ ರಾಜ್ಯದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. * ಈ ಹಿಂದಿನ ವರ್ಷ ಕರ್ನಾಟಕ ರಾಜ್ಯದಲ್ಲಿ ಒಟ್ಟು 1,701 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದವು, ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಸುಮಾರು 1,397 ಪ್ರಕರಣ ದಾಖಲಾಗಿದ್ದವು ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿತ್ತು, ಇದೀಗ ಮತ್ತೇ ಮಲೇರಿಯಾ ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ ಎಂದು ಆರೋಗ್ಯ ಇಲಾಖೆಯ ಕಳವಳವನ್ನು ವ್ಯಕ್ತ ಪಡಿಸಿದೆ. * 2019 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2,593 ಪ್ರಕರಣಗಳು ಪತ್ತೆಯಾಗಿದ್ದವು, ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,797 ಮಲೇರಿಯಾ ಪ್ರಕರಣಗಳು ದಾಖಲಾಗಿದ್ದವು, ಆರೋಗ್ಯ ಇಲಾಖೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯು ಮಲೇರಿಯಾ ಮತ್ತು ಡೆಂಗಿ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರಂಭಿಸಿದೆ.