Job Description: * 2021-30 ಕ್ಕೆ ಜನಸಂಖ್ಯಾ ನಿಯಂತ್ರಣ ವಿಷಯದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಹೊಸ ನೀತಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಈ ನೀತಿಯನ್ನು ಜುಲೈ. 11 ರ ವಿಶ್ವ ಜನಸಂಖ್ಯಾ ದಿನಾಚರಣೆದಂದು ಬಿಡುಗಡೆ ಮಾಡಲು ಸಿದ್ಧವಾಗಿದೆ. * ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಜನಸಂಖ್ಯೆ ನಿಯಂತ್ರಣಕ್ಕೆ ಸಮುದಾಯ ಕೇಂದ್ರಿತ ವಿಧಾನವನ್ನು ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. * ಉತ್ತರ ಪ್ರದೇಶ ರಾಜ್ಯದ ಸಮುದಾಯಗಳಲ್ಲಿ ಜನಸಂಖ್ಯೆಯ ಬಗ್ಗೆ ಜಾಗೃತಿ ಮೂಡಿಸಲು ಸಮುದಾಯ ಕೇಂದ್ರಿತ ವಿಧಾನದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದ್ದಾರೆ. * 2011 ರ ಜನಗಣತಿಯ ಪ್ರಕಾರ ಭಾರತದ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಿವೆ. * ಜನಸಂಖ್ಯಾ ನಿಯಂತ್ರಣದ ನೀತಿಯ ಉದ್ದೇಶಗಳು: - ಜನಸಂಖ್ಯೆ ನಿಯಂತ್ರಣಕ್ಕೆ 5 ಹಂತದ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು. - ಆರೋಗ್ಯವನ್ನು ಸುಧಾರಿಸುವತ್ತ ಗಮನ ಹರಿಸಲಿದೆ. - ಕುಟುಂಬ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಗರ್ಭನಿರೋಧಕ ಕ್ರಮಗಳ ಪ್ರವೇಶವನ್ನು ಹೆಚ್ಚಿಸಲು ಸರ್ಕಾರವು ಮುಂದಾಗಿದೆ, ಮತ್ತು ಸುರಕ್ಷಿತ ಗರ್ಭಪಾತಕ್ಕೆ ಸರ್ಕಾರವು ಉತ್ತಮವಾದ ವ್ಯವಸ್ಥೆಯನ್ನು ಒದಗಿಸಲಿದೆ. - ಸುಧಾರಿತ ಆರೋಗ್ಯ ಸೌಲಭ್ಯಗಳ ಮೂಲಕ ಶಿಶು ಮತ್ತು ತಾಯಿಯ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಪ್ರಯತ್ನಗಳನ್ನು ಸಹ ಮಾಡಲಾಗುತ್ತದೆ. - ವೃದ್ಧರ ಆರೈಕೆ ಮತ್ತು 11 ರಿಂದ 19 ವರ್ಷ ವಯಸ್ಸಿನವರಿಗೆ ಶಿಕ್ಷಣ, ಆರೋಗ್ಯ ಮತ್ತು ಪೋಷಣೆಯ ಉತ್ತಮ ನಿರ್ವಹಣೆಗೆ ಒದಗಿಸಿಕೊಡಲಾಗುವದು. - ಬೇರೆ ಬೇರೆ ಸಮುದಾಯಗಳಲ್ಲಿ ಜನಸಂಖ್ಯಾ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಸುಧಾರಿತ ಆರೋಗ್ಯ ಸೌಲಭ್ಯಗಳ ನೀಡಲು ಉತ್ತರ ಪ್ರದೇಶ ಸರ್ಕಾರವು ಮುಂದಾಗಿದೆ.