Job Description: * ಕರ್ನಾಟಕ ರಾಜ್ಯ ಸರ್ಕಾರದಿಂದ ಅಪರಾಧ ಕೃತ್ಯ ತಡೆಗೆ ಮುಂದಾಗಲು ಮಹತ್ವದ ಹೆಜ್ಜೆಯನ್ನು ಇಡುತ್ತಿದೆ, ಅದುವೇ ದೇಶದಲ್ಲಿಯೇ ಮೊಟ್ಟ ಮೊದಲ "ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ" ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. * ಈ ಹುದ್ದೆಯಿಂದ ಅಪರಾಧ ಕೃತ್ಯ ನಡೆಡಿರುವ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಲು ಮತ್ತು ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ಸಹಾಯಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. * ಈ ಹುದ್ದೆಯ ಕುರಿತು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿರುವ ಪ್ರಕಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ 'scene of crime officer' ಹುದ್ದೆಗಳ ಆದೇಶ ಪ್ರತಿಯನ್ನು ನೀಡಲಿದ್ದಾರೆ. * ಈ ರೀತಿಯ ಹೊಸ ಪೊಲೀಸ್ ಹುದ್ದೆಗಳನ್ನು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಸೃಷ್ಟಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. * ಮೊದಲ ಬಾರಿ 206 ಜನರ ನುರಿತ ಅಧಿಕಾರಿಗಳ ಹುದ್ದೆಗಳನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಂಜೂರು ಮಾಡಿ ಅಧಿಕೃತವಾಗಿ ಸರ್ಕಾರಿ ಆದೇಶವನ್ನು ರಾಜ್ಯ ಗೃಹ ಇಲಾಖೆಗೆ ನೀಡಲಿದ್ದಾರೆ, ಹಾಗೂ ಇದೇ ಸಂಧರ್ಭದಲ್ಲಿ ಪೊಲೀಸರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ವಿದ್ಯಾನಿಧಿ - 2 ಯೋಜನೆಗೆ ಚಾಲನೆ ನೀಡಲಿದ್ದಾರೆ.