Job Description: * ಇದೇ ಮೊದಲ ಬಾರಿಗೆ 13 ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶ ಪಡೆಯುದ್ದಕ್ಕಾಗಿ ಇರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. * ಇದೇ ಸಂಧರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲವಾಗುವಂತೆ ಕುವೈತ್ನಲ್ಲೂ ನೀಟ್ ಪರೀಕ್ಷಾ ಕೇಂದ್ರ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. * 2021ರ ನೀಟ್ ಪರೀಕ್ಷಾ ನೋಂದಣಿ ಇದೀಗ ಪ್ರಾಂಭವಾಗಿದೆ, ಹಿಂದಿ, ಪಂಜಾಬಿ, ಅಸ್ಸಾಮಿ, ಬಂಗಾಲಿ, ಒಡಿಯಾ, ಗುಜರಾತಿ, ಮರಾಠಿ, ತೆಲುಗು, ಮಲೆಯಾಳಂ, ಕನ್ನಡ, ತಮಿಳು, ಉರ್ದು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಿಳಿಸಿದ್ದಾರೆ. * ಈ ನೀಟ್ ಪರೀಕ್ಷೆಯನ್ನು ಸೆಪ್ಟಂಬರ್ 12ಕ್ಕೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.