Job Description: * ಟೋಕಿಯೊದಲ್ಲಿ ನಡೆಯಲಿರುವ ಒಲಿಂಪಿಕ್ಸ್ನ ಜಿಮ್ನಾಸ್ಟಿಕ್ಸ್ ಸ್ಪರ್ಧೆಗೆ ಭಾರತದ ದೀಪಕ್ ಕಾಬ್ರಾ ಅವರು ನಿರ್ಣಾಯಕರಾಗಿ ಕಾರ್ಯವನ್ನು ನಿರ್ವಹಿಸಲಿದ್ದಾರೆ. * ಈ ನಿರ್ಣಾಯಕ ಕಾರ್ಯಕ್ಕೆ ಆಯ್ಕೆಯಾದ ಮೊದಲ ಭಾರತೀಯರಾಗಿದ್ದಾರೆ, ಪ್ರಸ್ತುತ ಇವರು ಪುರುಷರ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್'ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. * ದೀಪಕ್ ಕಾಬ್ರಾ ಅವರು ತಮ್ಮ 12ನೇ ವಯಸ್ಸಿನಲ್ಲಿ ಜಿಮ್ನಾಸ್ಟಿಕ್ಸ್ ಪ್ರಾರಂಭಿಸಿದ್ದರು, ಇವರು 2007ರಲ್ಲಿ ಗುವಾಹಟಿಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು, ಅಲ್ಲದೇ 2005ರಿಂದ 2009ರವರೆಗೆ ಗುಜರಾತ್ ರಾಜ್ಯದ ಚಾಂಪಿಯನ್ ಆಗಿಹೊರಹೊಮ್ಮಿದ್ದರು. * 2010ರಲ್ಲಿ ಭಾರತದಲ್ಲಿ ನಡೆದಿದ್ದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು, ಹಾಗೂ ಇದಲ್ಲದೇ 2014ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಯೂತ್ ಒಲಿಂಪಿಕ್ಸ್ನಲ್ಲಿ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ, ಮತ್ತೇ 2018ರ ಏಷ್ಯನ್ ಮತ್ತು ಕಾಮನ್ವೆಲ್ತ್ ಕೂಟಗಳಲ್ಲಿ ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ.