Job Description: * ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದೇಶೀಯವಾಗಿ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಅಭಿವೃದ್ಧಿಪಡಿಸಿದೆ. * DRDO ಅಭಿವೃದ್ಧಿಪಡಿಸಿದ ಈ ಮಿಶ್ರ ಲೋಹವನ್ನು ಏರೋಸ್ಪೇಸ್ ಅಪ್ಲಿಕೇಷನ್ಗಳಿಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. * ಪ್ರಸ್ತುತ 15 ಕ್ಕೂ ಹೆಚ್ಚು ಉಕ್ಕಿನ ಘಟಕಗಳನ್ನು ಕೇಂದ್ರ ಸಚಿವಾಲಯದ ಏರೋನಾಟಿಕ್ ಡೆವಲಪ್ಮೆಂಟ್ ಏಜೆನ್ಸಿ ಗುರುತಿಸಿದೆ, ಹಾಗೂ ಮುಂದಿನ ದಿನಗಳಲ್ಲಿ ಬೀಟಾ ಟೈಟಾನಿಯಂ ಮಿಶ್ರಲೋಹ ತಯಾರಿಕೆಗೆ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. * ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ದೇಶೀಯವಾಗಿ ಅಭಿವೃದ್ಧಿಪಡಿಸಿದ DRDO'ಗೆ ಅಭಿನಂದನೆ ತಿಳಿಸಿದ್ದಾರೆ. * ಈ ಬೀಟಾ ಟೈಟಾನಿಯಂ ಮಿಶ್ರಲೋಹ ಅತ್ಯುತ್ತಮ ತುಕ್ಕು ನಿರೋಧಕ ಗುಣ ಹಾಗೂ ದೀರ್ಘ ಬಾಳಿಕೆಯ ಸಾಮರ್ಥ್ಯ ಹೊಂದಿದೆ, ಅಲ್ಲದೇ ಉಕ್ಕುಗಳಿಗೆ ಹೋಲಿಸಿದರೆ ಈ ಮಿಶ್ರ ಲೋಹವು ಉತ್ತಮವಾಗಿದೆ.