Job Description: * ಇದೇ ಜುಲೈ 27 ರಂದು ಅಮೇರಿಕದ ವಿದೇಶಾಂಗ ಸಚಿವರಾದ ಆಂಟನಿ ಬ್ಲಿಂಕನ್ ಅವರು ಭಾರತಕ್ಕೆ ಆಗಮಿಸಲಿದ್ದಾರೆ, ಹಾಗೂ ಇಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ, ಇದರ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಬ್ಲಿಂಕನ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. * ಭಾರತ, ಜಪಾನ್, ಆಸ್ಟ್ರೇಲಿಯಾ ಮತ್ತು ಅಮೇರಿಕ ನಾಯಕರ ಶೃಂಗಸಭೆಯು ಈ ವರ್ಷದ ಕೊನೆಯಲ್ಲಿ ವಾಷಿಂಗ್ಟನ್ನಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ, ಈ ಹಿನ್ನಲೆಯಿಂದಾಗಿ ಬ್ಲಿಂಕನ್ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಲಾಗಿದೆ.