Job Description: * ಕೇರಳ ರಾಜ್ಯದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯು, ಸರ್ಕಾರಿ ನೌಕರರಿಗೆ ವರದಕ್ಷಿಣೆ ತೆಗೆದುಕೊಂಡಿಲ್ಲ ಎಂಬ ಅಫಿಡ್ವಿಟ್ (ಪ್ರಮಾಣಪತ್ರ) ಸಲ್ಲಿಸಲು ಸೂಚನೆ ನೀಡಿದೆ. * ಪ್ರಸ್ತುತ ಕೇರಳ ರಾಜ್ಯದಲ್ಲಿ ಇತ್ತೀಚೆಗೆ ವರದಕ್ಷಿಣೆ ಸಾವು ಮತ್ತು ಕಿರುಕುಳಗಳು ಅತೀ ಹೆಚ್ಚಾಗಿ ನಡೆಯುತ್ತಿವೆ ಈ ಕಾರಣದಿಂದ ಸರ್ಕಾರವು ವರದಕ್ಷಿಣೆಯನ್ನು ತಡೆಗಟ್ಟುವ ಹಿನ್ನಲೆಯಿಂದಾಗಿ ಈ ನಿರ್ಧಾರವನ್ನು ಕೈಗೊಂಡಿದೆ. * ಇತ್ತೀಚಿಗೆ ಕೇರಳ ರಾಜ್ಯದ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದರು.