Job Description: * ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕರ್ನಾಟಕ ರಾಜ್ಯದ ಕಲಬುರ್ಗಿ(ಗುಲ್ಬರ್ಗ)ದಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಒಳಗೊಂಡಂತೆ ಒಟ್ಟಾರೆ ದೇಶದ 12 ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ ಮಾಡಲು ಅನುಮೋದನೆ ನೀಡಿದ್ದಾರೆ. * ಇತ್ತೀಚಿಗೆ ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು, ಜಾರ್ಖಂಡ್, ತಮಿಳುನಾಡು, ಮತ್ತು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಲಾಗಿದೆ ಎಂದು ಶಿಕ್ಷಣ ಸಚಿವಾಲಯ ಮಾಹಿತಿಯನ್ನು ಪ್ರಕಟಿಸಿದೆ. * ಪ್ರಸ್ತುತ ಭಾರತ ದೇಶದ 22 ಕೇಂದ್ರೀಯ ವಿಶ್ವವಿದ್ಯಾಲಯಗಳ ಕುಲಪತಿಗಳ ಹುದ್ದೆಗಳು ಖಾಲಿ ಇವೆ, ಅದರಲ್ಲಿ 12 ವಿಶ್ವವಿದ್ಯಾಲಯಗಳಿಗೆ ಕುಲಪತಿ ನೇಮಕಾತಿ ಕೆಲಸ ಪೂರ್ಣವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.