Job Description: * ಪ್ರಸ್ತುತ ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಅವರು ತಿಳಿಸಿರುವ ಪ್ರಕಾರ ಟೋಕಿಯೊ ಒಲಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ, ಹಾಗೂ ರಾಜ್ಯ ಸರ್ಕಾರದಿಂದ 1 ಕೋಟಿ ರೂ. ಬಹುಮಾನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. * ಶೀಘ್ರದಲ್ಲೇ ಮಣಿಪುರ ರಾಜ್ಯದಲ್ಲಿ ವಿಶ್ವ ದರ್ಜೆ ಗುಣಮಟ್ಟದ ವೇಯ್ಟ್ ಲಿಫ್ಟಿಂಗ್ ಅಕಾಡೆಮಿ ಸ್ಥಾಪನೆ ಮಾಡಲು ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ. * ಭಾರತದ ಜೂಡೋ ಆಟಗಾರ್ತಿ ಸುಶೀಲಾ ದೇವಿ ಅವರು ಇದೀಗ ಕಾನ್ ಸ್ಟೇಬಲ್ ಹುದ್ದೆಯಿಂದ ಸಬ್ ಇನ್ಸ್ಪೆಕ್ಟರ್ ಆಗಿ ಬಡ್ತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ, ಹಾಗೂ ಇದರ ಜೊತೆಗೆ ರಾಜ್ಯದಿಂದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ 25 ಲಕ್ಷ ರೂ. ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. * ಪ್ರಸ್ತುತ ಮಣಿಪುರ ರಾಜ್ಯದಿಂದ ಟೋಕಿಯೊ ಒಲಂಪಿಕ್ಸ್ನಲ್ಲಿ ಚಾನು, ದೇವಿ ಹಾಗೂ ಮೇರಿ ಕೋಮ್ ಸೇರಿ '5' ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.