Job Description: * ಕರ್ನಾಟಕ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. * ಬೊಮ್ಮಾಯಿ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. * ಪ್ರಸ್ತುತ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ಚಾಂದ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣವಚನವನ್ನು ಬೋಧಿಸಿದರು. * ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುವ ಸಮಯದಲ್ಲಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಗೃಹಮಂತ್ರಿ, ಮತ್ತು ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿದ್ದರು. * ಪ್ರಸ್ತುತ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. * ಬಸವರಾಜ ಬೊಮ್ಮಾಯಿ ಅವರು 2008 ರಲ್ಲಿ ಬಿಜೆಪಿ ಪಕ್ಷವನ್ನು ಸೇರಿಕೊಂಡರು, 2008 ರಿಂದ 2013 ರವರೆಗೆ ಜಲ ಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. * ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್.ಆರ್. ಬೊಮ್ಮಾಯಿ ಅವರು 1988-89 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.