Job Description: * ಪ್ರಸ್ತುತ ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. * ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳೆ ಇವರಾಗಿದ್ದಾರೆ. * ಈ ಹಿಂದೆ 2016 ರ ರಿಯೋ ಒಲಂಪಿಕ್ಸ್ ನಲ್ಲಿ ಪಿ.ವಿ. ಸಿಂಧು ಅವರು ಬೆಳ್ಳಿ ಪದಕವನ್ನು ಜಯಿಸಿದ್ದರು. * ಈ ಟೋಕಿಯೊ ಒಲಂಪಿಕ್ಸ್ ನಲ್ಲಿ ಪಿ.ವಿ. ಸಿಂಧು ಅವರು ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ 2 ನೇ ಶ್ರೇಯಾಂಕದಲ್ಲಿನ ತೈಜು ಯಿಂಗ್ ವಿರುದ್ಧ ಸೋಲುನ್ನು ಅನುಭವಿಸಿದರು, ನಂತರ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಪಿ.ವಿ. ಸಿಂಧು ಅವರು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ ಗೆಲುವು ದಾಖಲಿಸಿದ್ದಾರೆ.