Job Description: * ಇದೀಗ ದೇಶಾದ್ಯಂತ 1,000 ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪನೆ ಮಾಡಲಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ, ಇದರಿಂದಾಗಿ ಭಾರತದಲ್ಲಿ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ತಿಳಿಸಿದೆ. * ಸದ್ಯ ಕೇಂದ್ರ ಸರ್ಕಾರವು ಭಾರತದಲ್ಲಿ 360 ಖೇಲೋ ಇಂಡಿಯಾ ಕೇಂದ್ರಗಳಿಗೆ ಸೂಚನೆಯನ್ನು ನೀಡಿದೆ. * ಕೇಂದ್ರ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ಅವರು ಈ ವಿಷಯವಾಗಿ ಅಂದರೆ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುತ್ತಿದೆ ಹಾಗೂ ವಾರ್ಷಿಕ 6.28 ಲಕ್ಷ ರೂ.ಗಳ ವಾರ್ಷಿಕ ಆರ್ಥಿಕ ನೆರವನ್ನು ನೀಡಲಾಗುತ್ತದೆ ಎಂದು ರಾಜ್ಯಸಭೆಗೆ ಲಿಖಿತ ರೂಪದಲ್ಲಿ ಮಾಹಿತಿಯನ್ನು ನೀಡಿದ್ದಾರೆ.