Job Description: * ಈ ಬಾರಿಯ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರು ಮಹಿಳಾ ಬಾಕ್ಸಿಂಗ್ನ 69 KG ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. * ಇದೀಗ ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ಜಯಿಸಿರುವ ಪದಕಗಳ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. * ಈ ಮೊದಲು 2008 ರಲ್ಲಿ ಬಾಕ್ಸರ್ ವಿಜೇಂದರ್ ಸಿಂಗ್ ಹಾಗೂ 2012 ರಲ್ಲಿ ಎಂ.ಸಿ.ಮೇರಿ ಕೋಮ್ ಒಲಿಂಪಿಕ್ಸ್ನ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು, ಇದೀಗ ಬಾಕ್ಸಿಂಗ್ ವಿಭಾಗದಲ್ಲಿ ಪದಕ ಗೆದ್ದ ಭಾರತದ ಮೂರನೇ ಬಾಕ್ಸರ್ ಇವರಾಗಿದ್ದಾರೆ.