Job Description: * ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ಯೋಜನೆಯಡಿ 2021 ರ ಆಗಸ್ಟ್. 2 ರ ಸಮಯಕ್ಕೆ ಸರಿಸುಮಾರು 5 ಕೋಟಿ ಫಲಾನುಭವಿಗಳನ್ನು ನೋಂದಾಯಿಸಲಾಗಿದೆ, ಹಾಗೂ 4 ಕೋಟಿ ಫಲಾನುಭವಿಗಳಿಗೆ ತರಬೇತಿ ನೀಡಲಾಗಿದೆ ಎಂದು ಇದೇ ಆಗಸ್ಟ್. 7 ರಂದು ಸರ್ಕಾರ ಘೋಷಣೆ ಮಾಡಿದೆ. * ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮಾಹಿತಿ ನೀಡಿರುವ ಪ್ರಕಾರ 2 ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಈ ಯೋಜನೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ 6 ಕೋಟಿ ಜನರನ್ನು ಡಿಜಿಟಲ್ ಸಾಕ್ಷರರನ್ನಾಗಿಸಲು ಪ್ರಾರಂಭಿಸಲಾಗಿದೆ. * ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.