Job Description: * 2021 ರ ಆಗಸ್ಟ್. 7 ರಂದು ದೆಹಲಿಯ ಡಾ.ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿನ ನಳಂದ ಸಭಾಗಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಡಾ. ವೀರೇಂದ್ರ ಕುಮಾರ್ ಅವರು ‘PM-DAKSH’ ಪೋರ್ಟಲ್ ಮತ್ತು ‘PM-DAKSH’ ಮೊಬೈಲ್ ಆಪ್'ನ್ನು ಆರಂಭಿಸಿದ್ದಾರೆ. * ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ PM-DAKSH ಪೋರ್ಟಲ್ ಹಾಗೂ ಮೊಬೈಲ್ ಆಪ್'ನ್ನು ಅಭಿವೃದ್ಧಿಪಡಿಸಿದೆ, ಈ ಆಪ್ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಹಾಗೂ ಸಫಾಯಿ ಕರಮಚಾರಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಪ್ರವೇಶಿಸಲು ಆಪ್'ನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.