Job Description: * ಪ್ರಸ್ತುತ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್ ನೀರಜ್ ಚೋಪ್ರಾ ಅವರು ಚಿನ್ನದ ಪದಕವನ್ನು ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ. * ನೀರಜ್ ಚೋಪ್ರಾ ಅವರು ಪುರುಷರ ಜಾವೆಲಿನ್ ಥ್ರೋ'ನಲ್ಲಿ 87.58 ಮೀ. ಎಸೆದು ದಾಖಲೆಯನ್ನು ನಿರ್ಮಿಸಿದ್ದಾರೆ ಇದರಿಂದಾಗಿ ಇವರಿಗೆ ಚಿನ್ನದ ಪದಕ ಲಭಿಸಿದೆ. * ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ 6 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದ್ದಾರೆ. * ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀರಜ್ ಚೋಪ್ರಾಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ ಎಂದು BCCI ಕಾರ್ಯದರ್ಶಿ ಜಯ್ ಶಾ ಅವರು ತಿಳಿಸಿದ್ದಾರೆ. * ಪ್ರಸ್ತುತ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕೂಡ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾಗೆ 2 ಕೋಟಿ ರೂ. ಬಹುಮಾನ ಘೋಷಣೆ ಮಾಡಿದ್ದಾರೆ, ಮೂಲತಃ ನೀರಜ್ ಚೋಪ್ರಾ ಅವರು ಪಂಜಾಬ್ ರಾಜ್ಯದವರಾಗಿದ್ದು ಇದು ರಾಜ್ಯಕ್ಕೆ ಹೆಮ್ಮೆಯ ವಿಚಾರ ಎಂದು ತಿಳಿಸಿದರು. * ನೀರಜ್ ಚೋಪ್ರಾ ಅವರಿಗೆ ಒಟ್ಟಾರೆ 12 ಕೋಟಿ 25 ಲಕ್ಷ ರೂ. ಬಹುಮಾನದ ಘೋಷಣೆಯಾಗಿದೆ ಎಂದು ತಿಳಿದು ಬಂದಿದೆ.