Job Description: * ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ದೇಶದಾದ್ಯಂತ ಸುಮಾರು 80 ಕೋಟಿ ಜನರಿಗೆ ಉಚಿತವಾಗಿ ಪಡಿತರವನ್ನು ನೀಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. * ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳ ಜೊತೆ ವರ್ಚುವಲ್ ಸಭೆಯ ಮೂಲಕ ಸಂವಾದವನ್ನು ನಡೆಸಿದರು ಇದೇ ಸಂಧರ್ಭದಲ್ಲಿ ದೇಶದಾದ್ಯಂತ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ ಎಂದು ತಿಳಿಸಿದರು. * ಪ್ರಸ್ತುತ ಕೇಂದ್ರ ಸರ್ಕಾರವು ಬಡವರ ಆಹಾರ ಹಾಗೂ ಉದ್ಯೋಗಕ್ಕಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಥವಾ ಪ್ರಧಾನ ಮಂತ್ರಿ ರೋಜಗಾರ್ ಯೋಜನೆಗೆ ಸರ್ಕಾರವು ಆದ್ಯತೆ ನೀಡಿದೆ ಎಂದು ತಿಳಿಸಿದರು.