Job Description: * ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕಾರ ಮಾಡಿದ ನಂತರ ಅಂದರೆ ಇದೀಗ ರಾಜ್ಯದ ರೈತರ ಮಕ್ಕಳಿಗೆ ಶಿಷ್ಯ ವೇತನವನ್ನು ನೀಡಲು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ್ದಾರೆ. * ರಾಜ್ಯದ ರೈತರ ಮಕ್ಕಳು ಪಿಯುಸಿ, ಡಿಪ್ಲೊಮಾ, ಐಟಿಐ ಓದುತ್ತಿರುವ ವಿದ್ಯಾರ್ಥಿಗಳಿಗೆ 2,500 ರೂ., ವಿದ್ಯಾರ್ಥಿನಿಯರಿಗೆ 3,000 ರೂ. ಶಿಷ್ಯ ವೇತನ ನೀಡಲಾಗುವುದು * ಪದವಿ ಬಿಎ, ಬಿಎಸ್ಸಿ, ಬಿಕಾಂ ವಿದ್ಯಾರ್ಥಿಗಳಿಗೆ 5000 ರೂಪಾಯಿ ಮತ್ತು ವಿದ್ಯಾರ್ಥಿನಿಯರಿಗೆ 5500 ರೂ. ಶಿಷ್ಯ ವೇತನ ನೀಡಲಾಗುವುದು. * ಎಲ್.ಎಲ್.ಬಿ., ಪ್ಯಾರಾಮೆಡಿಕಲ್, ಬಿ ಫಾರ್ಮಾ, ನರ್ಸಿಂಗ್ ವಿದ್ಯಾರ್ಥಿಗಳಿಗೆ 7,500 ರೂಪಾಯಿ, ವಿದ್ಯಾರ್ಥಿನಿಯರಿಗೆ 8000 ರೂ. ಶಿಷ್ಯ ವೇತನ ನೀಡಲಾಗುವುದು. * ಎಂಬಿಬಿಎಸ್, ಬಿಇ, ಬಿಟೆಕ್, ಪಿಜಿ ವಿದ್ಯಾರ್ಥಿಗಳಿಗೆ 10,000 ರೂ., ವಿದ್ಯಾರ್ಥಿನಿಯರಿಗೆ 11,000 ರೂ. ಶಿಷ್ಯ ವೇತನ ನೀಡಲಾಗುತ್ತದೆ, ಹಾಗೂ ಇದಲ್ಲದೇ ಕೃಷಿ ಜಮೀನು ಹೊಂದಿದ ರೈತರ ಮಕ್ಕಳಿಗೆ ಶಿಷ್ಯವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.