Job Description: * ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರದ ಸಭೆ ಸಮಾರಂಭಗಳಲ್ಲಿ ಇನ್ನು ಮುಂದೆ ಹೂಗುಚ್ಚ, ಹಾರ, ಶಾಲುಗಳನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆದೇಶಿಸಿದ್ದಾರೆ. * ಬೆಂಗಳೂರು ವಿಧಾನಸೌಧದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹೂಗುಚ್ಚ ಸ್ವೀಕರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿರಾಕರಿಸಿದರು, ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಶಾಲುಗಳನ್ನು ನೀಡುವದನ್ನು ನಿಷೇಧಿಸಿದ್ದಾರೆ, ನಂತರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಈ ವಿಷಯದ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. * ಇನ್ನು ಮುಂದೆ ರಾಜ್ಯದ ಅಧಿಕಾರಿಗಳ ಸಭೆ ಸಮಾರಂಭಗಳಲ್ಲಿ ಹೂಗುಚ್ಛ , ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆಗಳನ್ನು ನೀಡದಂತೆ ಆದೇಶ ಹೊರಡಿಸಿದ್ದಾರೆ, ಈ ಎಲ್ಲಾ ಕಾಣಿಕೆಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ.