Job Description: * ಇತ್ತೀಚಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನ ಪ್ರಶಸ್ತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದೆ, ಆದರೆ ಇದೀಗ ಮಹಾರಾಷ್ಟ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ (IT) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ಘೋಷಣೆ ಮಾಡಿದೆ. * ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1984 ರಿಂದ 1989 ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೇ ಇವರು ಐಟಿ(IT) ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ, ಇವರ ಈ ಕೊಡುಗೆಯನ್ನು ಸ್ಮರಿಸಲು ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿ ಹೆಸರಿನಲ್ಲಿ ಪ್ರಶಸ್ತಿಯನ್ನು ಘೋಷಿಸಿದೆ. * ಇನ್ನು ಮುಂದೆ ಪ್ರತಿವರ್ಷವು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಮಹಾ ಸರ್ಕಾರದ ಆದೇಶ ಹೊರಡಿಸಿದೆ.