Job Description: * 2021ರ ಆಗಸ್ಟ್ 13 ರಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಿಸಲು ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮವನ್ನು ದೇಶಾದ್ಯಂತ 75 'ಐಕಾನಿಕ್' ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. * ಈ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ 2021ರ ಅಕ್ಟೋಬರ್.2 ರಂದು ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಿಂದ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. * ಫಿಟ್ ಇಂಡಿಯಾ ಫ್ರೀಡಮ್ ರನ್ ಕಾರ್ಯಕ್ರಮ 744 ಜಿಲ್ಲೆಗಳು, 75 ಹಳ್ಳಿಗಳು ಮತ್ತು 744 ಜಿಲ್ಲೆಗಳು ಮತ್ತು 30,000 ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದೆ. * ಈ ಹಿಂದೆ 2020'ರ ಆಗಸ್ಟ್ 15 ರಿಂದ ಅಕ್ಟೋಬರ್ 2,ವರೆಗೆ ಫಿಟ್ ಇಂಡಿಯಾ ಫ್ರೀಡಂ ರನ್'ನ ಮೊದಲ ಆವೃತ್ತಿಯನ್ನು ಆಯೋಜಿಸಲಾಗಿತ್ತು. * ಈ ಫಿಟ್ ಇಂಡಿಯಾ ಫ್ರೀಡಂ ರನ್ ಅಭಿಯಾನದಿಂದ ಜನರು ಸೋಮಾರಿತನ, ಬೊಜ್ಜು, ಒತ್ತಡ, ಮತ್ತು ರೋಗಗಳಿಂದ ಮುಕ್ತವಾಗಿಸಲು ಈ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ.