Job Description: * ಪ್ರಸ್ತುತ ಕೇರಳ ರಾಜ್ಯದ ಪೊಲೀಸ್ ಇಲಾಖೆಯು ದೇಶದ ಮೊದಲ 'ಡ್ರೋನ್ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರ'ಕ್ಕೆ ಚಾಲನೆಯನ್ನು ನೀಡಿದೆ. * ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರವನ್ನು ಉದ್ಘಾಟಿಸಿದರು. * ಡ್ರೋನ್ಗಳನ್ನು ಬಳಕೆ ಮಾಡಿಕೊಂಡು ನಡೆಸುವ ದಾಳಿಗಳು ದೇಶದಲ್ಲಿ ಭದ್ರತಾ ವ್ಯವಸ್ಥೆಗೆ ಒಳಪಟ್ಟಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ತಿಳಿಸಿದೆ. * ಈ ಡ್ರೋನ್ ವಿಧಿವಿಜ್ಞಾನ ಪ್ರಯೋಗಾಲಯವು ಡ್ರೋನ್ ನಿರೋಧಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದೆ, ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಹಾರಾಟ ನಡೆಸುವ ಎಲ್ಲ ಡ್ರೋನ್ಗಳನ್ನು ಪತ್ತೆ ಪಡುವದು ಮತ್ತು ಅವುಗಳ ಕಾರ್ಯವನ್ನು ನಿಷ್ಕ್ರಿಯಗೊಳಿಸುವ ಸಾಮರ್ಥ್ಯವನ್ನು ಈ ವ್ಯವಸ್ಥೆ ಹೊಂದಿರಲಿದೆ ಎಂದು ತಿಳಿಸಿದ್ದಾರೆ.