Job Description: * ಪ್ರಸ್ತುತ ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯವು ಈ ಬಾರಿ ಆಯೋಜಿಸಿದ್ದ 'ಮುಶೈರಾ' ಎಂಬ ಕವಿಗೋಷ್ಠಿಯಲ್ಲಿ ಈ ಹಿಂದಿನ ವರ್ಷ ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವು ಕವಿಗಳಿಗೆ ಆಹ್ವಾನ ನೀಡಿರುವ ಹಿನ್ನಲೆಯಿಂದಾಗಿ ರದ್ದುಗೊಳಿಸಲಾಗಿದೆ. * ಈ ಕವಿಗೋಷ್ಠಿಯನ್ನು ಉತ್ತರ ಪ್ರದೇಶದ ಉರ್ದು ವಿಶ್ವವಿದ್ಯಾನಿಲಯ ಮತ್ತು ಕೇಂದ್ರ ಸಾಂಸ್ಕೃತಿಕ ಸಮಿತಿಯು ಜಂಟಿಯಾಗಿ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿತ್ತು. * ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಮೊದಲು ಕವಿಗೋಷ್ಠಿಯನ್ನು ಯಾವುದೇ ಕಾರಣ ನೀಡದೆ ಕಾರ್ಯಕ್ರಮ ರದ್ದುಗೊಳಿಸುವುದಾಗಿ ತಿಳಿಸಿದ್ದರು, ಆದರೆ ಕೇಸರಿ ಸಂಘಟನೆಗಳ ಹಾಗೂ ಬಿಜೆಪಿಯ ಕೆಲವು ನಾಯಕರು ದೆಹಲಿಯ ಶಾಹೀನ್ ಬಾಗ್ನಲ್ಲಿ ಸಿಎಎ(CAA) ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲವು ಕವಿಗಳ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ವಿರೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. * 2019 ರ ಡಿಸೆಂಬರ್ ನಲ್ಲಿ ಈ CAA ಪ್ರತಿಭಟನೆಗಳು ನಾಲ್ಕು ತಿಂಗಳುಗಳ ಕಾಲ ನಡೆದಿದೆ, ಅದರಲ್ಲೂ ಸಿಎಎ ವಿರುದ್ಧ ಹೆಚ್ಚಾಗಿ ಮುಸ್ಲಿಮರು ಪ್ರತಿಭಟನೆಗಳನ್ನು ನಡೆಸಿದ್ದರು.