Job Description: * ಪ್ರಸ್ತುತ ಕೇಂದ್ರ ಸರ್ಕಾರವು ದೇಶಾದ್ಯಂತ ಇರುವ ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ, ಹಾಗೂ 2024 ರ ಹೊತ್ತಿಗೆ 'ಭಾರತ್ ನೆಟ್’ ಯೋಜನೆಯ ಅಡಿಯಲ್ಲಿ ದೇಶದ 6 ಲಕ್ಷ ಹಳ್ಳಿಗಳಿಗೆ ಡಿಜಿಟಲ್ ಸಂವಹನ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ. * ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದ ಪ್ರತಿ ಜಿಲ್ಲೆಯ ಒಂದು ಹಳ್ಳಿಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದಿದ್ದಾರೆ, ಇದರಿಂದಾಗಿ ಗ್ರಾಮೀಣ ಭಾಗದಲ್ಲಿರುವ ನೆಟ್ವರ್ಕ್ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.