Job Description: * ಇದೀಗ ಅಫ್ಘಾನಿಸ್ತಾನ ರಾಷ್ಟ್ರವು ತಾಲಿಬಾನ್ ಉಗ್ರರ ವಶದಲ್ಲಿದೆ, ಇದೀಗ ಅಲ್ಲಿನ ಕರ್ನಾಟಕ ರಾಜ್ಯದ ಪ್ರಜೆಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಅವರನ್ನು ರಾಜ್ಯಕ್ಕೆ ಮರಳಿ ಕರೆತರಲು ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ. * ಪ್ರಸ್ತುತ ಕೇಂದ್ರ ಸರ್ಕಾರ ಆಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಮರಳಿ ಕರೆತರಲು ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ ಮತ್ತು ಇ-ಮೇಲ್ ಸೇವೆಯನ್ನು ಪ್ರಾರಂಭಿಸಿದೆ, ಇದೀಗ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ IPS ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.