Job Description: * ಪ್ರಸ್ತುತ ಸೆಪ್ಟೆಂಬರ್ 5 ರಂದು ನಡೆಯಲಿರುವ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(NDA) ಪರೀಕ್ಷೆ ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. * ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(NDA) ಸೇರಲು ಇಲ್ಲಿಯವರೆಗೆ ಕೇವಲ ಪುರುಷರಿಗೆ ಮಾತ್ರ ಅವಕಾಶವಿತ್ತು, ಆದರೆ ಇದೀಗ ಸುಪ್ರೀಂ ಕೋರ್ಟ್ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ NDA ಸೇರಲು ಅವಕಾಶ ನೀಡಬೇಕೆಂದು ಆದೇಶಿಸಿದೆ. * ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ವಿಚಾರಣೆ ನಡೆಸಿ ಪುರುಷರಿಗೆ ಮಾತ್ರ ಅವಕಾಶ ನೀಡುತ್ತಿರುವ ಈ ನಿಯಮ ಬದಲಾಗಬೇಕಿದೆ ಎಂದು ಆದೇಶ ಹೊರಡಿಸಿ, ಮುಂದಿನ ಸೆಪ್ಟೆಂಬರ್ 5'ಕ್ಕೆ ನಡೆಯಲಿರುವ NDA ಪರೀಕ್ಷೆಗೆ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಭಾರತೀಯ ಸೇನೆಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.