Job Description: * ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಬಿಗಿ ಭದ್ರತೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಕ್ಕೆ ಆಗಮಿಸಿದರು. * ಭಾರತೀಯ ವಾಯುಸೇನೆಯ ವಿಶೇಷ ಹೆಲಿಕ್ಯಾಪ್ಟರ್ನ ಮೂಲಕ ಹೊಸಪೇಟೆ ನಗರದ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ವೆಂಕಯ್ಯ ನಾಯ್ಡು ಅವರು ಆಗಮಿಸಿದರು, ಹಾಗೂ ಇವರನ್ನು ಸಚಿವ ಆನಂದ್ ಸಿಂಗ್ ಸ್ವಾಗತ ಮಾಡಿಕೊಂಡರು. * ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು. * ಆಗಸ್ಟ್. 21 ರಂದು ಹಂಪಿಗೆ ಭೇಟಿ ನೀಡಿ ಅಲ್ಲಿನ ಸ್ಮಾರಕಗಳನ್ನು ವೀಕ್ಷಣೆ ಮಾಡಿ ತಡ ರಾತ್ರಿ ಅಲ್ಲಿಯೇ ಉಳಿದುಕೊಂಡು, ಆಗಸ್ಟ್. 22 ರಂದು ಬೆಳಗಿನಜಾವಾ ಹೆಲಿಕ್ಯಾಪ್ಟರ್ನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪಯಣ ಬೆಳಸಲಿದ್ದಾರೆ ಎಂದು ತಿಳಿದು ಬಂದಿದೆ.