Job Description: * ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ಸಹಿ ಹಾಕಿದ್ದಾರೆ. * ಸಂವಿಧಾನದ 105 ನೇ ತಿದ್ದುಪಡಿಯ ಈ ಮಸೂದೆಯನ್ನು ಒಬಿಸಿ ಮಸೂದೆಯೆಂದೇ ಕರೆಯಲಾಗುತ್ತಿದೆ, ಹಾಗೂ ಇದೇ ಆಗಸ್ಟ್.11 ರಂದು ಈ ಮಸೂದೆಯನ್ನು ಸಂಸತ್ ನಲ್ಲಿ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ. * ಈ ಮಸೂದೆಯ ತಿದ್ದುಪಡೆಯಿಂದಾಗಿ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಕಾನೂನುಗಳು ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆದುಕೊಳ್ಳಲಿವೆ ಎಂದು ತಿಳಿಸಿದ್ದಾರೆ.