Job Description: * ಕೇಂದ್ರ ಸಚಿವ ಸಂಪುಟವು ತಾಳೆ ಮರದ ಕೃಷಿಗೆ ಪ್ರೋತ್ಸಾಹ ನೀಡಲು, ಹಾಗೂ ದೇಶೀಯ ಖಾದ್ಯ ಪಾಮ್ ಆಯಿಲ್(ತಾಳೆ ಎಣ್ಣೆ) ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ 11,040 ಕೋಟಿ ರೂ. ಮೊತ್ತದ ರಾಷ್ಟ್ರೀಯ ಯೋಜನೆಗೆ ಅನುಮೋದನೆ ನೀಡಿದೆ. * ಕೇಂದ್ರ ಸಂಪುಟವು 'ದಿ ನ್ಯಾಷನಲ್ ಮಿಷನ್ ಆನ್ ಎಡಿಬಲ್ ಆಯಿಲ್ಸ್-ಆಯಿಲ್ ಪಾಮ್'ಗೆ ಅನುಮೋದನೆಯನ್ನು ನೀಡಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ಆಗಸ್ಟ್. 15 ರ ಸ್ವಾತಂತ್ರ್ಯೋತ್ಸವ ದಿನದ ಭಾಷಣದಲ್ಲಿ ಈ ಯೋಜನೆಯ ಬಗ್ಗೆ ಪ್ರಸ್ತಾಪವನ್ನು ನೀಡಿದ್ದರು. * ಪ್ರಸ್ತುತ ಈ ಯೋಜನೆಯನ್ನು ಈಶಾನ್ಯ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳಿಗಾಗಿ ರೂಪಿಸಲಾಗಿದೆ, ಇದರಿಂದಾಗಿ ತಾಳೆ ಬೆಳೆ ಬೆಳೆಯುವ ಪ್ರದೇಶವನ್ನು ಹೆಚ್ಚಿಸುವ ಉದ್ದೇಶವಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. * ಈ ಯೋಜನೆಯಡಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನವನ್ನು ಹಾಗೂ ತಾಳೆ ಬೆಳೆ ಕೃಷಿಗೆ ಅಗತ್ಯವಿರುವ ಸಾಧನಗಳ ಖರೀದಿಗೆ ಸಾಲ ನೀಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.