Job Description: * ಬಿಜೆಪಿಯ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರು ಅನಾರೋಗ್ಯದ ಹಿನ್ನಲೆಯಿಂದಾಗಿ ವಿಧಿವಶರಾಗಿದ್ದಾರೆ, ಇವರ ಈ ನಿಧನಕ್ಕೆ ಈಗಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಂಬನಿ ಮಿಡಿದಿದ್ದಾರೆ. * ಕಲ್ಯಾಣ್ ಸಿಂಗ್ ಅವರು 1992 ರ ಡಿಸೆಂಬರ್ 6 ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. * ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. * ಪ್ರಸ್ತುತ ಕಲ್ಯಾಣ್ ಸಿಂಗ್ ಅವರು ಮುಂದಾಳತ್ವದಿಂದ ಇದೀಗ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ ಎಂದು ಈಗಿನ ಮುಖ್ಯಮಂತ್ರಿ ಯೋಗಿ ಅವರು ತಿಳಿಸಿದರು. * ಕಲ್ಯಾಣ್ ಸಿಂಗ್ ಅವರು 1992 ರ ಡಿಸೆಂಬರ್ 6 ರ ಘಟನೆ ಬಳಿಕ ನೈತಿಕ ಹೊಣೆ ಹೊತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.