Job Description: * ಇತ್ತೀಚಿಗೆ ಅನಾರೋಗ್ಯದ ಕಾರಣದಿಂದಾಗಿ ನಿಧನರಾದ ಉತ್ತರ ಪ್ರದೇಶದ ಮಾಜಿ ಮುಖ್ಯ ಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಉತ್ತರ ಪ್ರದೇಶದ ಅಯೋಧ್ಯೆ, ಲಕ್ನೋ ಸೇರಿ ಒಟ್ಟು 6 ಜಿಲ್ಲೆಗಳ ಪ್ರಮುಖ ರಸ್ತೆಗಳಿಗೆ ಹೆಸರಿಡಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. * ಈ ವಿಷಯದ ಮಾಹಿತಿಯನ್ನು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಘೋಷಣೆ ಮಾಡಿದ್ದಾರೆ, ಇದರಿಂದಾಗಿ ಕಲ್ಯಾಣ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ. * ಈ ಹಿಂದೆ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯಾಗಿದ್ದ ಸಂಧರ್ಭದಲ್ಲಿ ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು, ಇದೀಗ ಅದೇ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ.