Job Description: * ಇದೀಗ ಭಾರತೀಯ ಸೇನೆಯ ಆಯ್ಕೆ ಮಂಡಳಿಯು 26 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಐದು(5) ಮಹಿಳಾ ಅಧಿಕಾರಿಗಳಿಗೆ ಕರ್ನಲ್ ಶ್ರೇಣಿಗೆ ಬಡ್ತಿ ನೀಡಲಾಗುತ್ತಿದೆ. * ಪ್ರಸ್ತುತ 'ಕಾರ್ಪ್ಸ್ ಆಫ್ ಸಿಗ್ನಲ್ಸ್', 'ಕಾರ್ಪ್ಸ್ ಆಫ್ ಎಲೆಕ್ಟ್ರಾನಿಕ್' ಮತ್ತು 'ಮೆಕ್ಯಾನಿಕಲ್ ಎಂಜಿನಿಯರ್ಸ್' ಹಾಗೂ 'ಕಾರ್ಪ್ಸ್ ಆಫ್ ಎಂಜಿನಿಯರ್ಸ್' ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳಗೆ ಕರ್ನಲ್ ಶ್ರೇಣಿಗೆ ಬಡ್ತಿ ನೀಡಲು ಇದೇ ಮೊದಲು ಬಾರಿ ಭಾರತೀಯ ಸೇನೆ ಮುಂದಾಗಿದೆ. * ಇದಕ್ಕೂ ಮೊದಲು 'ಸೇನಾ ವೈದ್ಯಕೀಯ ಪಡೆ' ಮತ್ತು 'ನ್ಯಾಯಾಧೀಶ ಅಡ್ವೊಕೇಟ್ ಜನರಲ್' ಹಾಗೂ 'ಸೇನಾ ಶಿಕ್ಷಣ ಪಡೆ' ಪಡೆದಿರುವ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್ ಹುದ್ದೆಗೆ ಬಡ್ತಿ ನೀಡಲಾಗುತ್ತಿತ್ತು. * ಪ್ರಸ್ತುತ ಕರ್ನಲ್ ಶ್ರೇಣಿಗೆ ಆಯ್ಕೆಯಾದ '5' ಮಹಿಳಾ ಅಧಿಕಾರಿಗಳು: ಲೆಫ್ಟಿನೆಂಟ್ ಕರ್ನಲ್ ಸಂಗೀತಾ ಸರ್ದಾನ, ಲೆಫ್ಟಿನೆಂಟ್ ಕರ್ನಲ್ ಸೋನಿಯಾ ಆನಂದ್, ಲೆಫ್ಟಿನೆಂಟ್ ಕರ್ನಲ್ ನವನೀತ್ ದುಗ್ಗಲ್ ಹಾಗೂ ಲೆಫ್ಟಿನೆಂಟ್ ಕರ್ನಲ್ ರೀನು ಖನ್ನಾ, ಮತ್ತು ಲೆಫ್ಟಿನೆಂಟ್ ಕರ್ನಲ್ ರಿಚಾ ಸಾಗರ್.