Job Description: * ಪ್ರಸ್ತುತ ಕರ್ನಾಟಕ ರಾಜ್ಯದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇದೀಗ ಮತ್ತೊಂದು ಪ್ರಶಸ್ತಿಯನ್ನು ಪಡೆದುಕೊಂಡಿದೆ, ಅದುವೇ 'ಸ್ಕೈಟ್ರಾಕ್ಸ್ ವರ್ಲ್ಡ್ ಏರ್ಪೋರ್ಟ್ ಅವಾರ್ಡ್ಸ್' ನೀಡುವ 'ಭಾರತ ಮತ್ತು ಮಧ್ಯ ಏಷ್ಯಾದಲಿಯ್ಲೇ ಅತ್ಯುತ್ತಮ ವಿಮಾನ ನಿಲ್ದಾಣ ಸಿಬ್ಬಂದಿ' (ಬೆಸ್ಟ್ ಏರ್ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆಯಂಡ್ ಸೆಂಟ್ರಲ್ ಏಷ್ಯಾ) ಪ್ರಶಸ್ತಿಯನ್ನು ಪಡೆದುಕೊಂಡಿದೆ. * ಈ ಮಾಹಿತಿಯನ್ನು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಸಿಇಓ(CEO) ಹರಿ ಮರಾರ್ ಅವರು ತಿಳಿಸಿದ್ದಾರೆ. * ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇದೇ ವರ್ಷದಲ್ಲಿ '3' ಪ್ರಶಸ್ತಿಗಳನ್ನೂ ಪಡೆದುಕೊಂಡಿದೆ, ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್'ನೀಡುವ ವಿಶ್ವದ 'ವಾಯ್ಸ್ ಆಫ್ ದಿ ಕಸ್ಟಮರ್' ಮಾನ್ಯತೆ, ಹಾಗೂ ಎಸಿಐ ಏರ್ಪೋರ್ಟ್ ಸರ್ವಿಸ್ ಕ್ವಾಲಿಟಿ ಅವಾರ್ಡ್ ಪಡೆದಿದೆ, ಹಾಗೂ ಮತ್ತೊಂದು ರೋಲ್ ಆಫ್ ಎಕ್ಸಲೆನ್ಸ್ ಫಾರ್ ದಿ ಇಯರ್ ಪ್ರಶಸ್ತಿಯನ್ನೂ ಕೂಡ ಪಡೆದಿದೆ.