Job Description: * ಪ್ರಸ್ತುತ 6 ಲಕ್ಷ ಕೋಟಿ ರೂ. ಮೌಲ್ಯದ 'ರಾಷ್ಟ್ರೀಯ ನಗದೀಕರಣ ಯೋಜನೆ'ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ. * ಈ ಯೋಜನೆಯು ಮುಖ್ಯವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್ಗಳನ್ನೂ ಒಳಗೊಂಡಿದೆ, ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. * ಈ ರಾಷ್ಟ್ರೀಯ ನಗದೀಕರಣ ಯೋಜನೆಯನ್ನು 2022 ರ ಹಣಕಾಸು ವರ್ಷದಿಂದ 2025 ರ ಹಣಕಾಸು ವರ್ಷವರೆಗೆ, ಅಂದರೆ ಮುಂದಿನ ನಾಲ್ಕು ವರ್ಷಗಳಲ್ಲಿ ಮೂಲಸೌಕರ್ಯ ಆಸ್ತಿಗಳನ್ನು ಮಾರಾಟ ಮಾಡಲಿದೆ ಎಂದು ತಿಳಿಸಲಾಗಿದೆ. * ಈ ರಾಷ್ಟ್ರೀಯ ನಗದೀಕರಣ ಪೈಪ್ಲೈನ್ ನ್ನು ಯಶಸ್ವಿಗೊಳಿಸಲು ಸಂಪೂರ್ಣವಾಗಿ ಬದ್ಧರಾಗಿದ್ದೇವೆ, ಅಲ್ಲದೇ ನಾವುಗಳು ಕಷ್ಟಪಟ್ಟು ಕೆಲಸ ಮಾಡಲು ಸಿದ್ಧರಾಗಿದ್ದೇವೆ ಎಂದು ನೀತಿ ಆಯೋಗದ ಸಿಇಒ(CEO) ಅಮಿತಾಭ್ ಕಾಂತ್ ತಿಳಿಸಿದ್ದಾರೆ. * ಈ ರಾಷ್ಟ್ರೀಯ ನಗದೀಕರಣ ಯೋಜನೆಯಲ್ಲಿ ಉತ್ತಮವಾಗಿ ಕಾರ್ಯಾಚರಣೆ ಹಾಗೂ ನಿರ್ವಹಣೆಗಾಗಿ ಖಾಸಗಿ ವಲಯಕ್ಕೆ ಪ್ರವೇಶಿಸುವುದು ಮುಖ್ಯ ಎಂದು ನೀತಿ ಆಯೋಗದ ಸಿಇಒ(CEO) ಅಮಿತಾಭ್ ಕಾಂತ್ ಅವರು ಅಭಿಪ್ರಾಯ ಪಟ್ಟಿದ್ದಾರೆ.