Job Description: * ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮುಂಬರುವ ಸೆಪ್ಟೆಂಬರ್ನಲ್ಲಿ ಸರಿ ಸುಮಾರು 20 ಕೋಟಿ ಡೋಸ್ ಕೋವಿಡ್ 19 ಕೊವಿಶೀಲ್ಡ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಮಾಡುವದಾಗಿ ಅಧಿಕೃತವಾಗಿ ತಿಳಿಸಿದೆ. * ಮಹಾರಾಷ್ಟ್ರದ ಪುಣೆಯ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಇಲ್ಲಿಯವರೆಗೆ ಅಂದರೆ ಆಗಸ್ಟ್ ತಿಂಗಳಿನವರೆಗೆ 12 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಿದೆ ಎಂದು ತಿಳಿಸಿದೆ. * ಈ ಲಸಿಕೆ ಪೂರೈಕೆಯ ಮಾಹಿತಿಯ ಬಗ್ಗೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಿ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ.