Job Description: * ಸುಪ್ರೀಂಕೋರ್ಟ್ ಗೆ ನೂತನ '9' ನ್ಯಾಯಾಧೀಶರ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ, ಇದರಲ್ಲಿ '3' ಮಹಿಳಾ ನ್ಯಾಯಾಧೀಶರಿದ್ದಾರೆ. * ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ, ಅಂದರೆ ಇವರು 2027 ರ ಸೆಪ್ಟೆಂಬರ್ ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. * ನೂತನ '9' ನ್ಯಾಯಾಧೀಶರು: ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಪಿ.ಎಸ್. ನರಸಿಂಹ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. * ಪ್ರಸ್ತುತ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಗಳಾಗಿ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್, ಜಿತೇಂದ್ರ ಕುಮಾರ್ ಮಹೇಶ್ವರಿ, ಹಿಮಾ ಕೊಹ್ಲಿ ಇವರನ್ನು ಸುಪ್ರೀಂ ಕೋರ್ಟ್ ನ ನೂತನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.