Job Description: * ಪ್ರಸ್ತುತ ಜಪಾನ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಅವನಿ ಲೇಖರಾ ಅವರು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ, ಅದುವೇ ಮಹಿಳೆಯರ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ SH1 ವಿಭಾಗದಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. * ಭಾರತೀಯ ಅವನಿ ಲೇಖರಾ ಅವರು ಈ ಸಾಧನೆ ಮಾಡುವ ಮೂಲಕ ಮೊದಲ ಮಹಿಳಾ ಪ್ಯಾರಾ ಅಥ್ಲೀಟ್ ಎಂಬ ಖ್ಯಾತಿಗೆ ಪಾತ್ರರಾದರು. * ಪ್ರಸ್ತುತ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಜಯಿಸಿದ ಅವನಿ ಲೇಖರಾ ಅವರಿಗೆ ಮಹೀಂದ್ರ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ತಮ್ಮ ಕಂಪನಿಯ ಎಸ್ಯುವಿ ಕಾರನ್ನು ಉಡುಗೊರೆಯಾಗಿ ನೀಡುವದಾಗಿ ಘೋಷಿಸಿದ್ದಾರೆ. * ಪ್ಯಾರಾಲಿಂಪಿಕ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಅವನಿ ಲೇಖರಾ ಅವರು ಜೈಪುರ ಮೂಲದವರಾಗಿದ್ದಾರೆ.