Job Description: * ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. * ಪ್ರಸ್ತುತ ಕೇಂದ್ರ ಸರ್ಕಾರದಿಂದ ಆಗಸ್ಟ್ ತಿಂಗಳಿನಲ್ಲಿ 1.10 ಕೋಟಿ ಲಸಿಕೆ ರಾಜ್ಯಕ್ಕೆ ಬಂದಿದೆ, ಹಾಗೂ ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವದಾಗಿ ಕೇಂದ್ರ ಸರ್ಕಾರ ತಿಳಿಸಿದೆ, ಇದರ ಮಧ್ಯೆ ವಾರದಲ್ಲಿ ಒಂದು ದಿನ ಅಂದರೆ ಪ್ರತಿ ಬುಧವಾರ ಲಸಿಕಾ ಉತ್ಸವ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.