Job Description: * ಇದೇ ಮೊದಲ ಬಾರಿ ಏಕಕಾಲದಲ್ಲಿ '3' ಮಹಿಳೆಯರು ಸೇರಿ ಒಟ್ಟಾರೆ '9' ಹೊಸ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ, ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರು ಪ್ರಮಾಣವಚನ ಬೋಧಿಸಿದರು. * ಈ '9' ಹೊಸ ನ್ಯಾಯಾಧೀಶರುಗಳಲ್ಲಿ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಈ ಮೊದಲು ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು, ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಈ ಮೊದಲು ಗುಜರಾತ್ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಾಧೀಶರಾಗಿದ್ದರು, ಹಾಗೂ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಮಹೇಶ್ವರಿ ಅವರು ಈ ಮೊದಲು ಸಿಕ್ಕಿಂ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದರು, ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರು ಈ ಮೊದಲು ತೆಲಂಗಾಣ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ನ್ಯಾಯಮೂರ್ತಿ.ಬಿ.ವಿ.ನಾಗರತ್ನ ಈ ಮೊದಲು ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದರು. * ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ, ನ್ಯಾಯಮೂರ್ತಿ ನಾಗರತ್ನ ಅವರು 2027 ರ ಸೆಪ್ಟೆಂಬರ್ ನಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. * ಪ್ರಮಾಣ ವಚನ ಸ್ವೀಕರಿಸಿದ ಹೊಸ ನ್ಯಾಯಾಧೀಶರು: ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ, ಹಾಗೂ ನ್ಯಾಯಮೂರ್ತಿ ಪಿ.ಎಸ್.ನರಸಿಂಹ. * ಪ್ರಸ್ತುತ ಮುಖ್ಯ ನ್ಯಾಯಾಧೀಶರು ಸೇರಿ ಸುಪ್ರೀಂ ಕೋರ್ಟ್ನ ಬಲವು 33 ರಷ್ಟಿದೆ ಎಂದು ತಿಳಿಸಲಾಗಿದೆ.