Job Description: * ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 'ಮುಖ್ಯಮಂತ್ರಿ ರೈತ ವಿದ್ಯಾನಿಧಿ' ಯೋಜನೆಗೆ ಚಾಲನೆ ನೀಡಿದ್ದಾರೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಭಾಗಿಯಾಗಿದ್ದರು. * ಕರ್ನಾಟಕ ಸರ್ಕಾರವು ಈ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡಲಿದೆ, ವಿದ್ಯಾರ್ಥಿಗಳ ಖಾತೆಗೆ ವಿದ್ಯಾನಿಧಿ ಹಣವನ್ನು ಸಾಂಕೇತಿಕವಾಗಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವರ್ಗಾವಣೆ ಮಾಡಿದರು. * ಈ ರೈತ ವಿದ್ಯಾನಿಧಿ ಯೋಜನೆಯಿಂದಾಗಿ ಸರಿ ಸುಮಾರು 17 ಲಕ್ಷ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ದಾರಿಯಾಗಲಿದೆ, ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ 2,500 ರೂಪಾಯಿ. ಮತ್ತು ವಿದ್ಯಾರ್ಥಿನಿಯರಿಗೆ 3 ಸಾವಿರ ರೂ.ಗಳನ್ನು ರಾಜ್ಯ ಸರ್ಕಾರ ನೀಡಲಿದೆ. * ಅಲ್ಲದೇ ಪದವೀಧರ ವಿದ್ಯಾರ್ಥಿಗಳಿಗೆ 5 ಸಾವಿರ ರೂ, ವಿದ್ಯಾರ್ಥಿನಿಯರಿಗೆ 5,500 ರೂ. ಹಣವನ್ನು, ಹಾಗೂ ಎಲ್ಎಲ್ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್, ನರ್ಸಿಂಗ್, ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಕ್ರಮವಾಗಿ 7,500 ರೂ, ಹಾಗೂ 8 ಸಾವಿರ ರೂ. ಹಣವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ತಿಳಿಸಿದ್ದಾರೆ. * ಎಂಬಿಬಿಎಸ್(MBBS), ಬಿಇ, ಬಿ.ಟೆಕ್ ಸ್ನಾತಕೋತ್ತರ ಕೋರ್ಸ್ ಕಲಿಯುತ್ತಿರುವ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಕ್ರಮವಾಗಿ 10 ಸಾವಿರ, ಮತ್ತು 11,000 ರೂ. ಶಿಷ್ಯ ವೇತನ ನೀಡಲಿದೆ ಎಂದಿದ್ದಾರೆ.