Job Description: * ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರವು ತುಮಕೂರು ಸಿದ್ದಗಂಗಾ ಮಠದ ದಾಸೋಹಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನ ಅಂದರೆ ಜನೇವರಿ 21 ನ್ನು 'ದಾಸೋಹ ದಿನ'ವಾಗಿ ಆಚರಿಸಲು ತೀರ್ಮಾನವನ್ನು ಕೈಗೊಂಡು ಈ ವಿಷಯದ ಬಗ್ಗೆ ಆದೇಶವನ್ನು ಹೊರಡಿಸಿದೆ. * ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಈ ದಿನವನ್ನು ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.