Job Description: * ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ತಮಿಳುನಾಡು, ಉತ್ತರಾಖಂಡ್, ಪಂಜಾಬ್ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. * ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ಅವರನ್ನು ನಾಗಾಲ್ಯಾಂಡ್ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಮಾಡಿದ್ದಾರೆ. * ತಮಿಳುನಾಡು ರಾಜ್ಯದ ರಾಜ್ಯಪಾಲರಾಗಿ ಆರ್. ಎನ್. ರವಿ ಅವರನ್ನು ನೇಮಕ ಮಾಡಲಾಗಿದೆ. * ಉತ್ತರಾಖಂಡ್ ರಾಜ್ಯದ ನೂತನ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಗವರ್ನರ್ ಗುರ್ ಮೀತ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. * ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ಬನ್ವರಿಲಾಲ್ ಪುರೋಹಿತ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಆದೇಶ ಹೊರಡಿಸಿದ್ದಾರೆ. * ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಕಾರ್ಯ ನಿರ್ವಹಿಸುತ್ತಿದ್ದಾರೆ.