Job Description: * ದೇಶದ ಅತ್ಯುತ್ತಮ ವಿಶ್ವವಿದ್ಯಾಲಯ ಮತ್ತು ಅತ್ಯುತ್ತಮ ಸಂಶೋಧನಾ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಬೆಂಗಳೂರು ಐಐಎಸ್ಸಿ(IISC) ಪಡೆದುಕೊಂಡಿದೆ. * ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್'ನ್ನು ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿದೆ, ಅದರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ಅತ್ಯುತ್ತಮ ವಿಶ್ವವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. * ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ದೇಶದ ವಿಶ್ವವಿದ್ಯಾಲಯಗಳಲ್ಲಿ ಮೊದಲ ಸ್ಥಾನ ಹಾಗೂ ಒಟ್ಟಾರೆ ರ್ಯಾಂಕಿಂಗ್ನಲ್ಲಿ 2ನೇ ಸ್ಥಾನವನ್ನು ಪಡೆದಿದೆ. * ಬೆಂಗಳೂರಿನ ನಿಮ್ಹಾನ್ಸ್ಗೆ ವೈದ್ಯಕೀಯ ವಿಭಾಗದಲ್ಲಿ 4ನೇ ಸ್ಥಾನ, ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜಿಗೆ 10ನೇ ಸ್ಥಾನ ಲಭಿಸಿವೆ. * ಪ್ರಸ್ತುತ ದಂತ ವೈದ್ಯಕೀಯ ಕಾಲೇಜು ರ್ಯಾಂಕಿಂಗ್ ಪಟ್ಟಿಯಲ್ಲಿ: ಉಡುಪಿಯಲ್ಲಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜು ಮೊದಲ ಸ್ಥಾನ, ಹಾಗೂ ಮಂಗಳೂರಿನ ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು, ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜು ಕ್ರಮವಾಗಿ 6 ಮತ್ತು 7ನೇ ಸ್ಥಾನವನ್ನು ಪಡೆದುಕೊಂಡಿವೆ. * ಕಾನೂನು ಶಿಕ್ಷಣ: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಮೊದಲ ಸ್ಥಾನ ಪಡೆದುಕೊಂಡಿದೆ. * ಎಂಜಿನಿಯರಿಂಗ್ ಶಿಕ್ಷಣ: ಸುರತ್ಕಲ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು 10ನೇ ಸ್ಥಾನ ಪಡೆದಿದೆ. * ಐಐಟಿ(IIT): ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮದ್ರಾಸ್ ಈ ವರ್ಷವೂ ಅಗ್ರಸ್ಥಾನ ಪಡೆದಿದೆ. * ವೈದ್ಯಕೀಯ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮೊದಲ ಸ್ಥಾನ ಲಭಿಸಿದೆ.