Job Description: * ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ರಾಜ್ಯದ ಅಲೀಗಡನ ರಾಜಾ ಮಹೇಂದ್ರ ಪ್ರತಾಪ ಸಿಂಗ್ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ. * ಈ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಾಗೂ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಭಾಗಿಯಾಗಿದ್ದರು. * ಪ್ರಸ್ತುತ ರಾಜಾ ಮಹೇಂದ್ರ ಪ್ರತಾಪ ಸಿಂಗ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ, ಸಮಾಜ ಸುಧಾರಕರಾಗಿದ್ದರು, ಇವರ ಸವಿನೆನಪಿಗಾಗಿ ಮತ್ತು ಗೌರವಾರ್ಥವಾಗಿ ಉತ್ತರ ಪ್ರದೇಶ ಸರ್ಕಾರವು ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತಿದೆ. * ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶ ರಾಜ್ಯದ ಅಲೀಗಡನ ಲೋಧಾ ಗ್ರಾಮದಲ್ಲಿ 92 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ನಿರ್ಧರಿಸಿದೆ, ಪ್ರಸ್ತುತ ಅಲೀಗಡದ 395 ಕಾಲೇಜುಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರಲಿವೆ ಎಂದಿದ್ದಾರೆ.