Job Description: * ಇದೇ ಸೆಪ್ಟೆಂಬರ್ 24 ರಂದು ವಾಷಿಂಗ್ಟನ್ನಲ್ಲಿ ನಡೆಯುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. * ಮತ್ತೇ ಇದೇ ಸೆಪ್ಟೆಂಬರ್ 25 ರಂದು ನ್ಯೂಯಾರ್ಕ್ ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ, ಹಾಗೂ ಚತುರ್ಭುಜ ಚೌಕಟ್ಟಿನ ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. * ಮಾರ್ಚ್ 2021 ರ ಕ್ವಾಡ್ ಸಭೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಲಸಿಕೆ ಆರಂಭದ ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. * ಚತುರ್ಭುಜ ಸಂವಾದ: 2007 ರಲ್ಲಿ ಕ್ವಾಡ್ ಗೆ ಅಮೇರಿಕ, ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾ ಈ ನಾಲ್ಕು ದೇಶಗಳನ್ನು ಸೇರಿಸಲಾಯಿತು, ಮತ್ತೇ ಈ ಗುಂಪನ್ನು 2017 ರಲ್ಲಿ ಪುನರುಜ್ಜೀವನಗೊಳಿಸಲಾಯಿತು.