Job Description: * ಪ್ರಸ್ತುತ 2021 ರ ಟೈಮ್ ನಿಯತಕಾಲಿಕೆಯ 100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ(CEO) ಆದರ್ ಪೂನವಲ್ಲ ಸ್ಥಾನ ಪಡೆದುಕೊಂಡಿದ್ದಾರೆ. * ಟೈಮ್ ವಾರ್ಷಿಕ 2021 ರ 100 ಪ್ರಭಾವಶಾಲಿಗಳ ಜಾಗತಿಕ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಡ್ಯೂಕ್ ಮತ್ತು ಡಚೆಸ್ ಆಫ್ ಸಸೆಕ್ಸ್ ಪ್ರಿನ್ಸ್ ಹ್ಯಾರಿ ಮತ್ತು ಮೇಘನ್, ಮಾಜಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ತಾಲಿಬಾನ್ ಸಹ ಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಸ್ಥಾನ ಪಡೆದುಕೊಂಡಿದ್ದಾರೆ. * ಈ ಹಿಂದೆ ಟೈಮ್ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಜವಾಹರಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ಅವರು ಸ್ಥಾನ ಪಡೆದುಕೊಂಡಿದ್ದರು.