Job Description: * ಪ್ರಸ್ತುತ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಯುಎಇಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ನಂತರ ಟಿ20 ನಾಯಕ ಸ್ಥಾನದಿಂದ ನಿರ್ಗಮಿಸುವುದಾಗಿ ಘೋಷಣೆ ಮಾಡಿದ್ದಾರೆ. * ವಿರಾಟ್ ಕೊಹ್ಲಿ ಅವರು ಭಾರತ ತಂಡದ ಕೋಚ್ ರವಿ ಶಾಸ್ತ್ರಿ ಹಾಗೂ ಸಹ ಆಟಗಾರ ರೋಹಿತ್ ಶರ್ಮಾ ಅವರ ಸಲಹೆಯನ್ನು ಪಡೆದ ನಂತರ ಟಿ20 ನಾಯಕ ಸ್ಥಾನದಿಂದ ನಿರ್ಗಮಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ, ಹಾಗೂ ಬಿಸಿಸಿಐ(BCCI) ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರಿಗೂ ಈ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ. * ಆದರೆ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಿಗೆ ಭಾರತ ತಂಡದ ನಾಯಕನಾಗಿ ಮುಂದುವರೆಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಅವರು ತಿಳಿಸಿದ್ದಾರೆ.